Wednesday, May 15, 2024
Homeತಾಜಾ ಸುದ್ದಿಶಿರಾಡಿ ಘಾಟ್ ನಲ್ಲಿ 3.8 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣವಾಗಲಿದೆ; ಲೋಕೋಪಯೋಗಿ ಸಚಿವ ಸತೀಶ್...

ಶಿರಾಡಿ ಘಾಟ್ ನಲ್ಲಿ 3.8 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣವಾಗಲಿದೆ; ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

spot_img
- Advertisement -
- Advertisement -

ಹಾಸನ: ಶಿರಾಡಿ ಘಾಟ್ ನಲ್ಲಿ 3.8 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅವರು ಇಂದು ಶಿರಾಡಿ ಘಾಟ್ ರಸ್ತೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಅವರು ಹಾಸನದಿಂದ ಸಕಲೇಶಪುರ ಬೈಪಾಸ್‌ವರೆಗೆ ನವೆಂಬರ್‌ 1 ರೊಳಗೆ ಕಾಮಗಾರಿ ಮುಗಿಸುವ ಬಗ್ಗೆ ತಿಳಿಸಲಾಗಿದೆ, ಆದರೆ ಅಧಿಕಾರಿಗಳು ಮುಂದಿನ ವರ್ಷ ಮಾರ್ಚ್‌24 ರವರೆಗೆನಮಗೆ ಸಮಯ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದರು.

ಇನ್ನೂ ಮಾರೇನಹಳ್ಳಿಯಿಂದ ಪ್ರಾರಂಭವಾಗಿ ಅಡ್ಡಹೊಳೆಯವರೆಗೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಒಟ್ಟು 30 ಕಿಲೋಮೀಟರ್ ಉದ್ದದ ರಸ್ತೆ ಇದಾಗಿದ್ದು, 3.8 ಕಿಲೋಮೀಟರ್ ಸುರಂಗ ಇದ್ದರೆ, 10 ಕಿ.ಮೀ ವಯಡಕ್ಟ್‌ ಇರಲಿದೆ ಅಂತ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!