- Advertisement -
![]()
- Advertisement -
ಪಾಲ್ಘರ್: ವ್ಯಕ್ತಿಯೊಬ್ಬ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೊಪರಾ ಎಂಬಲ್ಲಿ ನಡೆದಿದೆ.
ಕೈಲಾಸ್ ವಿಜು ಪಾರ್ಮರ್ (35) ಎಂಬಾತ ತನ್ನ 12 ವರ್ಷದ ಮಗ, 8 ಮತ್ತು 5 ವರ್ಷದ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ್ದಾನೆ ಎಂದು ಪಾಲ್ಘಾರ್ ಪೊಲೀಸ್ ವಕ್ತಾರರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಕೃತ್ಯಕ್ಕೆ ಕಾರಣ ಏನು ಎಂಬುದು ಸದ್ಯ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
- Advertisement -


