Friday, June 5, 2026
Homeಕೊಡಗುಕೊಡಗು; 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ನಿಧನ

ಕೊಡಗು; 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ನಿಧನ

- Advertisement -
- Advertisement -

ಕೊಡಗು: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.

ಕೀರ್ತನ್ (12) ಮೃತ ದುರ್ದೈವಿ. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಕೀರ್ತನ್‌ ಓದುತ್ತಿದ್ದ ಅದೇ ಶಾಲೆಯಲ್ಲೇ ಬಸ್ ಚಾಲಕನಾಗಿ ತಂದೆ ಮಂಜಾಚಾರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ತಡರಾತ್ರಿ ಕೀರ್ತನ್ ಮಲಗಿದ್ದ ಜಾಗದಿಂದಲೇ ಎರಡು ಬಾರಿ ಎದೆ ನೋವು ಎಂದು ಕಿರುಚಿಕೊಂಡಿದ್ದ. ಇದರಿಂದಾಗಿ ಗಾಬರಿಗೊಂಡ ಆತನ ಪೋಷಕರು ತಕ್ಷಣವೇ ಕುಶಾಲನಗರ ಆಸ್ಪತ್ರೆ ಕರೆದೊಯ್ದಿದ್ದಾರೆ. ಆದರೆ ಕೀರ್ತನ್‌ ಆ ವೇಳೆಗೆ ಮೃತಪಟ್ಟಿದ್ದ. ಇತ್ತೀಚೆಗೆ ಪುಟ್ಟ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪಿರುವ ಪ್ರಕರಣ ಹೆಚ್ಚಾಗುತ್ತಿದ್ದು ಆತಂಕ ಮೂಡಿಸುತ್ತಿದೆ.

- Advertisement -

Latest News

error: Content is protected !!