2023ನೇ ಸಾಲಿನ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾಗೆ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ, ಫೈನಲ್ ಪಂದ್ಯದಲ್ಲಿ ಎಡವಿದೆ. ಆದರೆ ಇದೀಗ ಟ್ರೋಫಿ ಗೆದ್ದ ಬಳಿಕ ಕೆಲ ಆಸ್ಟ್ರೇಲಿಯಾ ಆಟಗಾರರ ಸಂಭ್ರಮಾಚರಣೆ ಅತಿರೇಕಕ್ಕೇರಿದೆ ಎನ್ನುವ ವ್ಯಾಪಕ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಶ್ವಕಪ್ ಗೆದ್ದ ಖುಷಿಯಲ್ಲಿ ಕೆಲ ಪ್ಲೇಯರ್ಸ್ ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ. ಆಸೀಸ್ ಆಟಗಾರ ಮಿಚೆಲ್ ಮಾರ್ಷ್ ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಟ್ರೋಫಿಯ ಮೇಲೆ ಪಾದವನ್ನಿಟ್ಟು ಫೋಟೋ ತೆಗೆಸಿಕೊಂಡಿದ್ದಾರೆ. ಮಿಚೆಲ್ ಮಾರ್ಷ್ ನಡೆದುಕೊಂಡ ರೀತಿಯ ಕುರಿತು ವ್ಯಾಪಕ ಚರ್ಚೆಗಳು, ಟೀಕೆಗಳು ನಡೆಯುತ್ತಿವೆ.
ಇನ್ನು ಮಾರ್ಷ್ ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಮಂದಿ ಮಾರ್ಷ್ ನಡೆಗೆ ಕಿಡಿ ಕಾರಿದ್ದು, ಟ್ರೋಫಿಗೆ ಈರೀತಿ ‘ಅಗೌರವ’ ತೋರುವುದು ಸರಿಯಲ್ಲ ಎಂದಿದ್ದಾರೆ.