Saturday, June 6, 2026
Homeತಾಜಾ ಸುದ್ದಿಯಕ್ಷಗಾನ ನೋಡಿ ಮನೆಗೆ ಬರುವಾಗ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ತಾಯಿ, ಮಗ ಸ್ಥಳದಲ್ಲೇ ಮೃತ್ಯು

ಯಕ್ಷಗಾನ ನೋಡಿ ಮನೆಗೆ ಬರುವಾಗ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ತಾಯಿ, ಮಗ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಅಂಕೋಲಾ: ಯಕ್ಷಗಾನ ನೋಡಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಡಿದು ತಾಯಿ, ಮಗ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಮೃತರನ್ನು ಅಂಕೋಲಾ ತಾಲೂಕಿನ ಅಂಗಡಿಬೈಲ್ ನಿವಾಸಿಗಳಾದ ಹರಿಹರ ರವಿ ಸಿದ್ದಿ ಮತ್ತು ಬೇಬಿ ರವಿ ಸಿದ್ದಿ ಎಂದು ಗುರುತಿಸಲಾಗಿದೆ. ನಿದ್ದೆ ಮಂಪರಿನಲ್ಲಿ ಬೈಕ್ ಚಾಲನೆ ವೇಳೆ ಅಪಘಾತ ಸಂಭವಿಸಿದೆ. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Latest News

error: Content is protected !!