Thursday, June 25, 2026
Homeಕರಾವಳಿಪಾಣೆಮಂಗಳೂರು: ಸೇತುವೆ ಬಳಿ ಬೈಕ್ ನಿಲ್ಲಿಸಿ ಯುವಕ ಕಣ್ಮರೆ, ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ...

ಪಾಣೆಮಂಗಳೂರು: ಸೇತುವೆ ಬಳಿ ಬೈಕ್ ನಿಲ್ಲಿಸಿ ಯುವಕ ಕಣ್ಮರೆ, ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಶಂಕೆ!!

- Advertisement -
- Advertisement -

ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಬಳಿ ಬೈಕನ್ನು ನಿಲ್ಲಿಸಿ ಬೆಂಗಳೂರು ಮೂಲದ ವ್ಯಕ್ತಿಯೋರ್ವ ನಾಪತ್ತೆಯಾಗಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು ದಾಸರಹಳ್ಳಿ ಮೂಲದ ಸತ್ಯವೇಲು(29) ನಾಪತ್ತೆಯಾದ ಯುವಕ. ಈತ ಸುಮಾರು 15 ದಿನಗಳ ಹಿಂದೆ ನದಿಗೆ ಹಾರುವುದಕ್ಕೆ ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಆಗಮಿಸಿದ್ದು,ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ. ಬಳಿಕ ಬಂಟ್ವಾಳ ನಗರ ಪೊಲೀಸರು ಆತನ ಪೋಷಕರನ್ನು ಕರೆಸಿ ಬುದ್ದಿಹೇಳಿ ಕಳುಹಿಸಿಕೊಟ್ಟಿದ್ದರು ಎನ್ನಲಾಗಿದೆ.

ಬುಧವಾರ ಮುಂಜಾನೆ 4:30 ಸುಮಾರಿಗೆ ಪಾಣೆಮಂಗಳೂರು ಸೇತುವೆಯ ಮೇಲೆ ಮತ್ತೆ ಆತನ ಬೈಕ್ ಪ್ರತ್ಯಕ್ಷವಾಗಿದ್ದು, ಬೈಕ್ ಸ್ಟಾರ್ಟ್ ನಲ್ಲೇ ಇತ್ತು ಎನ್ನಲಾಗಿದೆ.ಬಳಿಕ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬೈಕನ್ನು ಠಾಣೆಗೆ ತಂದಿದ್ದಾರೆ.
ಜು. 17ರಂದು ತಾಯಿಯಿಂದ ಪೆಟ್ರೋಲ್ ಹಾಕುವುದಕ್ಕೆ 200 ರೂ. ಪಡೆದು ಕೆಲಸಕ್ಕೆಂದು ತೆರಳಿದ್ದವನು, ಕೆಲಸಕ್ಕೆ ಹೋಗದೇ ರಾತ್ರಿ‌ 11ರ ಸುಮಾರಿಗೆ ತಾಯಿಗೆ ಕರೆ ಮಾಡಿ ಸ್ನೇಹಿತನ ಮನೆಯಲ್ಲಿರುವುದಾಗಿ‌ ತಿಳಿಸಿದ್ದಾನೆ.

ಆತ ಮೊಬೈಲ್ ಆನ್ಲೈನ್ ಗೇಮ್ ಮೂಲಕ ಸಾಕಷ್ಟು ಹಣ ಕಳೆದುಕೊಂಡಿದ್ದು, ಹೀಗಾಗಿ ಆತ ಈ ರೀತಿ ವರ್ತಿಸುತ್ತಿದ್ದಾನೆ ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತನ ನಾಪತ್ತೆಯ ಕುರಿತು ಬೆಂಗಳೂರಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ. ‌

- Advertisement -

Latest News

error: Content is protected !!