Friday, June 5, 2026
Homeಕರಾವಳಿಉಡುಪಿಕುಂದಾಪುರ: ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಮಾರ್ಗ ಮಧ್ಯೆಯೇ ಮೃತಪಟ್ಟ ಹಿಂಬದಿ ಸವಾರ

ಕುಂದಾಪುರ: ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಮಾರ್ಗ ಮಧ್ಯೆಯೇ ಮೃತಪಟ್ಟ ಹಿಂಬದಿ ಸವಾರ

- Advertisement -
- Advertisement -

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟ ಘಟನೆ ಸೋಮೇಶ್ವರ ಮಾಂಡಿ ಮೂರುಕೈ ರಸ್ತೆ ಸಮೀಪ ಮಡಮಕ್ಕಿ ಶಾಲೆಯ ಬಳಿ ನಡೆದಿದೆ. ಮೃತನನ್ನು ರಾಜೇಶ್ ನಾಯಕ್ ಎಂದು ಗುರುತಿಸಲಾಗಿದೆ.

ಮನೋರಂಜನ್ ತನ್ನ ಬೈಕ್ ನಲ್ಲಿ ರಾಜೇಶ್ ನಾಯ್ಕ್ ರನ್ನು ಹಿಂಬದಿ ಸವಾರನಾಗಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ರಾಜೇಶ್ ನಾಯ್ಕ್ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!