Monday, June 8, 2026
Homeಕರಾವಳಿಉಡುಪಿನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟ ಬೈಕ್‌ ಸವಾರ; ಟ್ಯಾಂಕರ್ ಲಾರಿ ಹರಿದು...

ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟ ಬೈಕ್‌ ಸವಾರ; ಟ್ಯಾಂಕರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಪಡುಬಿದ್ರೆ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿಯಲ್ಲಿ ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್‌ ಸವಾರ ರಸ್ತೆಗೆ ಎಸೆಲ್ಪಟ್ಟು, ಬೈಕ್‌ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಸಂಭವಿಸಿದೆ.

ಕಂಚಿನಡ್ಕ ನಿವಾಸಿ ಪ್ರಜ್ವಲ್ ಮೃತಪಟ್ಟ ವ್ಯಕ್ತಿ. ಮಂಗಳೂರು ಕಡೆಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ಲಿಸಿದ ವೇಳೆ ಹಿಂದಿನಿಂದ ಬಸ್ ಗೆ ಪ್ರಜ್ವಲ್ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಆಗಲೇ ಹಿಂದಿನಿಂದ ಬಂದ ಟ್ಯಾಂಕರ್ ಪ್ರಜ್ವಲ್ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನಾಸ್ಥಳಕ್ಕೆ ಪಡುಬಿದ್ರೆ ಪೊಲೀಸರು ಭೇಟಿನೀಡಿದ್ದು, ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!