Monday, May 13, 2024
Homeಕರಾವಳಿಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ

spot_img
- Advertisement -
- Advertisement -

ಮಂಗಳೂರು; ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿಯಾದ ಘಟನೆ  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.  ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂಡಿಗೋ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಇದನ್ನರಿತ ಪೈಲಟ್​ ಭಾರೀ ದುರಂತವನ್ನು ತಪ್ಪಿಸುವ ಮೂಲಕ ಪ್ರಯಾಣಿಕರ ಜೀವ ಉಳಿಸಿದ್ದಾರೆ. ಹಕ್ಕಿ ಡಿಕ್ಕಿ ಹೊಡೆದೊಡನೆ ಪೈಲಟ್​ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ್ದಾರೆ. ನಂತರ ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಾಸ್ ಬಂದಿಳಿದಿದೆ. ಸದ್ಯ ಅಧಿಕಾರಿಗಳು ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡುತ್ತಿದ್ದಾರೆ. ಇನ್ನು ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ವ್ಯವಸ್ಥೆ ಕಲ್ಪಿಸಲಾಗಿದೆ.

- Advertisement -
spot_img

Latest News

error: Content is protected !!