Wednesday, June 24, 2026
Homeತಾಜಾ ಸುದ್ದಿಜೋಗ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃತ್ಯು 

ಜೋಗ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃತ್ಯು 

- Advertisement -
- Advertisement -

ಬಂಟ್ವಾಳ: ತಾಲೂಕಿನ ಶಂಭೂರು ಶ್ರೀ ಸಾಯಿ ಮಂದಿರದಿಂದ ಸುಮಾರು 55 ಮಂದಿ ಖಾಸಗಿ ಬಸ್ ನಲ್ಲಿ ಜೋಗ ಜಲಪಾತಕ್ಕೆ ತೆರಳಿದ್ದು, ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಡಿ.30 ಸೋಮವಾರದಂದು ರಾತ್ರಿ ಮೃತಪಟ್ಟಿದ್ದಾರೆ.

ಶಂಭೂರು ಮುಂಡಜೋರ ನಿವಾಸಿ ಭಾರತಿ (55) ಮೃತಪಟ್ಟ ಮಹಿಳೆ ಎನ್ನಲಾಗಿದೆ. ಘಟನೆಯಲ್ಲಿ ಕೈ ಹಾಗೂ ಎದೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಭಾರತಿ ಅವರು ಸುಮಾರು 15 ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಘಟನೆಯಲ್ಲಿ ಸುಮಾರು 20 ಕ್ಕೂ ಅಧಿಕ ಮಂದಿಗೆ ಗಂಭೀರವಾಗಿ ಗಾಯವಾಗಿದ್ದು, ಇವರೆಲ್ಲರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಲ್ಲಿ ಸಾಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಶಾಸಕರ ಸೂಚನೆಯಂತೆ ಎ.ಜೆ.ಆಸ್ಪತ್ರೆಯಲ್ಲಿ ಗಂಭೀರ ಗಾಯಗೊಂಡ ಎಲ್ಲರನ್ನು ಚಿಕಿತ್ಸೆ ನೀಡಲು ದಾಖಲು ಮಾಡಲಾಗಿತ್ತು. 

ಭಾರತಿ ಅವರ ಮಗಳಿಗೂ ಕೂಡ ಅಪಘಾತವಾಗಿದ್ದು, ಮಂಗಳೂರು ಎಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!