- Advertisement -
- Advertisement -
ಬಂಟ್ವಾಳ: ಶಂಭೂರಿನಿಂದ ಜೋಗ ಜಲಪಾತಕ್ಕೆ ಪ್ರವಾಸಕ್ಕೆ ಹೋಗಿದ್ದ ಬಸ್ ಅಪಘಾತವಾಗಿ 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಸಾಗರ ತಾಲೂಕಿನ ಕಾರ್ಗಲ್ ಬಳಿಯ ತಿರುವಿನಲ್ಲಿ ನಡೆದಿದೆ.
ಸುಮಾರು 50 ಮಂದಿಯಿದ್ದ ಪ್ರವಾಸಿಗರ ತಂಡ ಖಾಸಗಿ ಬಸ್ ನಲ್ಲಿ ಶಂಭೂರಿನಿಂದ ಜೋಗ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು, ಜೋಗ್ ಫಾಲ್ಸ್ ಗೆ ಇನ್ನೇನು ತಲುಪಲು ಕೆಲವೇ ಕಿಮೀ ದೂರದ ಕಾರ್ಗಲ್ ಎಂಬಲ್ಲಿ ಹೋಗುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ.
ಘಟನೆಯಲ್ಲಿ ಶಂಭೂರಿನ ಯಶೋಧಾ ಹಾಗೂ ದೀಕ್ಷಿತಾ ಅವರಿಗೆ ಗಂಭೀರ ಗಾಯವಾಗಿದ್ದು, ಬಸ್ಸಿನಲ್ಲಿದ್ದ ಒಂದಷ್ಟು ಮಂದಿಯ ಕೈ-ಕಾಲಿಗೆ ಗಂಭೀರ ಗಾಯವಾಗಿದ್ದು, ಒಂದಿಬ್ಬರು ಮಕ್ಕಳ ತಲೆಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರಿಗೆ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆ ತರಲಾಗಿದೆ.
- Advertisement -