Monday, September 9, 2024
Homeತಾಜಾ ಸುದ್ದಿಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಬೆಂಕಿಗಾಹುತಿ; ಅದೃಷ್ಟವಶಾತ್ ಪ್ರಯಾಣಿಕರು ಪಾರು

ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಬೆಂಕಿಗಾಹುತಿ; ಅದೃಷ್ಟವಶಾತ್ ಪ್ರಯಾಣಿಕರು ಪಾರು

spot_img
- Advertisement -
- Advertisement -

ಶಿವಮೊಗ್ಗ: ಭಟ್ಕಳದಿಂದ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಅಗ್ನಿಗಾಹುತಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಈ ಘಟನೆಯು ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಸಂಭವಿಸಿದೆ. ಇಡೀ ಬಸ್ ಹೊತ್ತಿ ಉರಿದಿದ್ದು, ಘಟನೆಯಲ್ಲಿ ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಮೂಲಗಳ ಪ್ರಕಾರ ಬೆಂಗಳೂರಿಗೆ ಭಟ್ಕಳದಿಂದ ಸಾಗರ ಮಾರ್ಗವಾಗಿ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿದ್ದನ್ನು ಅರಿತ ಚಾಲಕ ಕೂಡಲೆ ಬಸ್ಸನ್ನು ನಿಲ್ಲಿಸಿದ್ದು, ಬಸ್ ನಲ್ಲಿದ್ದ ಎಲ್ಲಾ 12 ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದಿದ್ದಾರೆ. ಈ ವೇಳೆಗಾಗಲೇ ಬೆಂಕಿ ಇಡೀ ಬಸ್ ಗೆ ವ್ಯಾಪಿಸಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಗ್ನಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹದು ಎಂದು ಶಂಕಿಸಲಾಗಿದೆ.

- Advertisement -
spot_img

Latest News

error: Content is protected !!