Thursday, June 4, 2026
Homeಕರಾವಳಿಉಡುಪಿಪೂನಾದಿಂದ ಉಡುಪಿಗೆ ತೆರಳುತ್ತಿದ್ದ ಬಸ್‌ ಸುಟ್ಟು ಭಸ್ಮ: ಅದೃಷ್ಟವಶಾತ್‌ ಪ್ರಯಾಣಿಕರು ಸೇಫ್‌

ಪೂನಾದಿಂದ ಉಡುಪಿಗೆ ತೆರಳುತ್ತಿದ್ದ ಬಸ್‌ ಸುಟ್ಟು ಭಸ್ಮ: ಅದೃಷ್ಟವಶಾತ್‌ ಪ್ರಯಾಣಿಕರು ಸೇಫ್‌

- Advertisement -
- Advertisement -

ಕಾರವಾರ: ಪೂನಾದಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್‌ನ ಹಿಂದಿನ ಚಕ್ರವು ಸ್ಫೋಟಗೊಂಡ ಪರಿಣಾಮ ಬಸ್‌ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕಾರವಾರ ರಸ್ತೆಯ ಟೋಲ್ ಗೇಟ್ ಬಳಿಯ ಸೇವಾ ರಸ್ತೆಯಲ್ಲಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಸೇಫ್‌ ಆಗಿದ್ದಾರೆ.

ಅದೃಷ್ಟವಶಾತ್ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಹಿಂದಿನ ಚಕ್ರ ಬ್ಲಾಸ್ಟಾಗಿ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತ ಚಾಲಕನು ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ.

- Advertisement -

Latest News

error: Content is protected !!