Thursday, June 4, 2026
Homeಅಪರಾಧಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಕಾರು; ಆರು ಮಂದಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಕಾರು; ಆರು ಮಂದಿ ಗಂಭೀರ

- Advertisement -
- Advertisement -

ಬಂಟ್ವಾಳ: ಮಾಣಿ ಸಮೀಪದ ‌ಕೊಡಾಜೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ.

ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಚಾಲಕನಿಗೆ ಕಾರನ್ನು ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಎದುರುಗಡೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿ ನಿಂತಿದೆ.

ಈ ಘಟನೆಯಲ್ಲಿ  ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಅಪಘಾತದಲ್ಲಿ ಕಾರು ಹಾಗೂ ಸ್ಕೂಟರ್ ಸಂಪೂರ್ಣ ‌ಜಖಂಗೊಂಡಿದ್ದು, ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ

- Advertisement -

Latest News

error: Content is protected !!