Thursday, July 16, 2026
Homeಕರಾವಳಿಉಡುಪಿಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ: ಮಂಗಳೂರಿನ ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್...

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ: ಮಂಗಳೂರಿನ ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ ನಿಧನ

- Advertisement -
- Advertisement -

ಉಡುಪಿ: ವಿದ್ಯುತ್ ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಢಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಮಂಗಳೂರಿನ ಉದ್ಯಮಿ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ವಾಹದನಲ್ಲಿ ಒಬ್ಬರೇ ಇದ್ದರು. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ.

ಇನ್ನು ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕೆ ಬಿದಿದ್ದು, ಕಾರು ನಜ್ಜುಗುಜ್ಜಾಗಿದೆ. ಕೂಡಲೇ ಅಭಿಷೇಕ್‌ ಅವರನ್ನು ಸ್ಥಳೀಯರ ಸಹಕಾರದಿಂದ ಆತನ ಸ್ನೇಹಿತರು ಮುಕ್ಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹೆಜಮಾಡಿ ಟೋಲ್ ಸಿಬ್ಬಂದಿ ಮತ್ತು ಪಡುಬಿದ್ರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!