- Advertisement -
![]()
- Advertisement -
ನೆಲ್ಯಾಡಿ: ಇಬ್ಬರು ಲಾರಿ ಚಾಲಕರು ಚಹಾ ಕುಡಿಯಲೆಂದು ಹೊಟೆಲ್ ಗೆ ತೆರಳಿ ಲಾರಿಯತ್ತ ಬರುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಚಾಲಕರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಜುಲೈ 8 ರಂದು ನಡೆದಿದೆ.
ಗಂಭೀರವಾಗಿ ಗಾಯಗೊಂಡವರು ಸಕಲೇಶಪುರ ಮೂಲದ ಲಾರಿ ಚಾಲಕರಾದ ವಿನಯ ಕುಮಾರ್ ಮತ್ತು ಮಂಜ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವಿನ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಈ ಅಪಘಾತ ನಡೆದಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ರಸ್ತೆ ಬದಿ ನಿಲ್ಲಿಸಿದ್ದ ಈಚರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ನಿಂತಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


