Thursday, June 4, 2026
Homeಕರಾವಳಿಉಡುಪಿಮೂಡಿಗೆರೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ;ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೂಡಿಗೆರೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ;ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ನೀರು ಗಂಡಿಯಲ್ಲಿ ರವಿವಾರ ಸಂಭವಿಸಿದೆ.

ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದು, ಉಡುಪಿ ಮೂಲದವರು ಎಂಎಂಬುದು ತಿಳಿದು ಬಂದಿದೆ. ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನೀರು ಗಂಡಿ ಸಮೀಪಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಕಾರು ಅಪಘಾತವಾದ ನೀರು ಗಂಡಿ ಈ ಸ್ಥಳದಲ್ಲಿ ವರ್ಷದಲ್ಲಿ ಹಲವಾರು ಅಪಘಾತಗಳು ಸಂಭವಿಸುತ್ತವೆ ಎನ್ನಲಾಗಿದೆ.

- Advertisement -

Latest News

error: Content is protected !!