Wednesday, June 24, 2026
Homeಕರಾವಳಿಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ; ಮುರಿದುಬಿದ್ದ ವಿದ್ಯುತ್‌ ಕಂಬ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ; ಮುರಿದುಬಿದ್ದ ವಿದ್ಯುತ್‌ ಕಂಬ

- Advertisement -
- Advertisement -

ವಿಟ್ಲ ಸಮೀಪದ ಉಕ್ಕುಡದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬವೇ ಮುರಿದುಬಿದ್ದ ಘಟನೆ ಸೋಮವಾರದಂದು ನಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇನ್ನು ಢಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ಮುರಿದುಬಿದ್ದಿದೆ. ಇದರ ಪರಿಣಾಮವಾಗಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗಳು ರಸ್ತೆಗೆ ಬಿದ್ದಿದ್ದು, ಈ ವೇಳೆ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!