Thursday, June 4, 2026
Homeತಾಜಾ ಸುದ್ದಿಪುತ್ತೂರು: 21 ವರ್ಷಗಳ ಹಿಂದಿನ ಕಾರು ಕಳವು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: 21 ವರ್ಷಗಳ ಹಿಂದಿನ ಕಾರು ಕಳವು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಪುತ್ತೂರು: 21 ವರ್ಷಗಳ ಹಿಂದೆ ನಡೆದ ನಡೆದ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಕದ್ರಿ ನಿವಾಸಿ ಸುಧೀರ್ ಪ್ರಭು ಬಂಧಿತ ಆರೋಪಿ.

ಈತ 2001 ಮಾರ್ಚ್ 8ರಂದು ಮಂಗಳೂರಿನ ಹಂಪನಕಟ್ಟೆಯಿಂದ ಜಯಂತ ಎಂಬುವವರಿಂದ ಬಾಡಿಗೆಗೆ ಪಡೆದಿದ್ದ ಟಾಟಾ ಸುಮೋ ಕಾರನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಸುಧೀರ್ ಪ್ರಭು ಮತ್ತು ಹನೀಫ್ ರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ ಹನೀಫ್‌ನನ್ನು 2018ರಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಇನ್ನೋರ್ವ ಆರೋಪಿ ಸುಧೀರ್ ಪ್ರಭುವನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!