- Advertisement -
- Advertisement -
ಉಡುಪಿ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ನಡೆದ ಕೊಲೆ ಪ್ರಕರಣದ ಬಗ್ಗೆ ಪ್ರಚೋದನಾಕಾರಿ ಪೋಸ್ಟ್ ಹಾಕಿದಾತನ ವಿರುದ್ಧ ಕೇಸ್ ದಾಖಲಾಗಿದೆ.
ಪೋಸ್ಟ್ ಹಾಕಿದ್ದ ಶಿವಮೊಗ್ಗ ಮೂಲದ ಹಫೀಜ್ ಮೊಹಮದ್ ಎಂಬಾತನ ವಿರುದ್ಧ ಉಡುಪಿಯಲ್ಲಿ ಟೌನ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ಈತ ‘ಪ್ರಿಪರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು’ ಎಂಬುದಾಗಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದನು. ಈ ಬಗ್ಗೆ ಉಡುಪಿ ಪೊಲೀಸರು ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಯತ್ನದ ಅರೋಪದ ಮೇಲೆ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
- Advertisement -