Monday, June 8, 2026
Homeಅಪರಾಧವಿಟ್ಲ: ಅಪ್ರಾಪ್ತೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣ; ಆರೋಪ ಸಾಬೀತು!

ವಿಟ್ಲ: ಅಪ್ರಾಪ್ತೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣ; ಆರೋಪ ಸಾಬೀತು!

- Advertisement -
- Advertisement -

ಮಂಗಳೂರು: 2019ರಲ್ಲಿ ಅಪ್ರಾಪ್ತೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.

ಬಂಟ್ವಾಳ ವಿಟ್ಲ ಕಸ್ಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಶಿಕ್ಷೆಗೊಳಗಾದವ . ಸೆ.27ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.



ಈ ಪ್ರಕರಣವು 2019ರ ಜುಲೈ 25ರಂದು ನಡೆದಿದೆ. ತನ್ನದೇ ಊರಿನ ಪರಿಚಿತ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್‌ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದಲ್ಲದೆ, ಬಿ.ಸಿ.ರೋಡ್‌ವರೆಗೆ ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಅಲ್ಲಿಂದ ಬಸ್‌ನಲ್ಲಿ ಮೂಡುಬಿದಿರೆ ನೆಲ್ಲಿಕಾರು ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಕರೆದೊಯ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಎಂದು ಆರೋಪಿಸಲಾಗಿತ್ತು. ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾನೆ. ಇಲ್ಲಿ ಬಾಲಕಿಯ ಪೋಷಕರು ಬಾಲಕಿ ನಾಪತ್ತೆಯಾದ ಬಗ್ಗೆ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.



ಇತ್ತ ಬೆಂಗಳೂರು ಪೊಲೀಸರು ಆರೋಪಿ ಮತ್ತು ಬಾಲಕಿಯನ್ನು ಅನುಮಾನದಿಂದ ವಿಚಾರಿಸಿದಾಗ ವಿಠಲ ಠಾಣೆಗೆ ಸಂಬಂಧಿಸಿದ ಪ್ರಕಾನ ಎನ್ನುವುದು ತಿಳಿದು ಬಂದಿದೆ. ಅಲ್ಲಿಂದ ಇಬ್ಬರನ್ನು ಪೊಲೀಸರು ವಿಟ್ಲಗೆ ಕರೆತಂದಿದ್ದು, ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಯಿತು. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು.ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೊಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.

- Advertisement -

Latest News

error: Content is protected !!