Thursday, June 4, 2026
Homeಕರಾವಳಿಮಂಗಳೂರುಕಡಬ; ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣ; ಗಂಭೀರ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ...

ಕಡಬ; ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣ; ಗಂಭೀರ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಕಡಬ; ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್ ರೈಲು ಟ್ರಾಕ್ ಬಳಿ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ(42) ಮೃತ ದುರ್ದೈವಿ. ಸಹೋದರ ನಿಂಗಪ್ಪ (21) ಅಣ್ಣನನ್ನು ಕೊಲೆಗೈದ ತಮ್ಮ. ಗಂಭೀರ ಸ್ಥಿತಿಯಲ್ಲಿದ್ದ ಹನುಮಪ್ಪ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ವಿಭಾಗದ ರೈಲ್ವೇ ಪೊಲೀಸ್‌ ಇನ್ಸ್ಪೆಕ್ಟರ್ ಜಯಾನಂದ, ಎಎಸ್ಐ ಮಧುಚಂದ್ರ, ವಿಧಿವಿಜ್ಞಾನ ತಂಡ ಹಾಗೂ ರೈಲ್ವೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಕಡಬ ಠಾಣಾ ಎಸ್ ಐ ಅಭಿನಂದನ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಘಟನೆ ನಡೆದ ದಿನವೇ ವಶಕ್ಕೆ ಪಡೆದಿದ್ದರು. ಅಲ್ಲದೇ ಪ್ರಕರಣವನ್ನು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದರು.

- Advertisement -

Latest News

error: Content is protected !!