Thursday, June 25, 2026
Homeಕರಾವಳಿಬೆಳ್ತಂಗಡಿ : ಮೃತದೇಹ ಹೂತಿರುವ ವ್ಯಕ್ತಿ ದೂರು ನೀಡಿದ ಪ್ರಕರಣ; ಪ್ರಕರಣದ ಬಗ್ಗೆ ಎಸ್ಪಿ ಪತ್ರಿಕಾ...

ಬೆಳ್ತಂಗಡಿ : ಮೃತದೇಹ ಹೂತಿರುವ ವ್ಯಕ್ತಿ ದೂರು ನೀಡಿದ ಪ್ರಕರಣ; ಪ್ರಕರಣದ ಬಗ್ಗೆ ಎಸ್ಪಿ ಪತ್ರಿಕಾ ಪ್ರಕಟಣೆ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತು ಹಾಕಿರುವ ಬಗ್ಗೆ ವ್ಯಕ್ತಿಯೊಬ್ಬ ದೂರು ಹಾಗೂ ಕೋರ್ಟ್ ಗೆ  ಹೇಳಿಕೆ ನೀಡಿದ ಪ್ರಕರಣದ ವಿಚಾರದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜುಲೈ 16ರಂದು ಪತ್ರಿಕಾ ಹೇಳಿಕೆಯೊಂದನ್ನು ನೀಡಿದ್ದಾರೆ. ತನಿಖಾಧಿಕಾರಿಯವರು ಯಾವ ಹಂತದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಸೂಕ್ತವೆಂದು ನಿರ್ಧರಿಸುತ್ತಾರೋ ಆಗ ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಿಕೊಂಡು ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಜುಲೈ16 ರಂದು ಹೇಳಿಕೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು ಈ ಬಗ್ಗೆ ತನಿಖಾಧಿಕಾರಿಗಳಿಗೆ ಇತ್ತೀಚೆಗೆ ಮಾಹಿತಿ ಬಂದಿದೆ. ಈ ವಿಚಾರವನ್ನು ತನಿಖಾಧಿಕಾರಿಯವರ ಗಮನಕ್ಕೆ ಸಾಕ್ಷಿ ದೂರುದಾರನ ಪರ ವಕೀಲರು ತಂದಿರುವುದಿಲ್ಲ.

ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಾಕ್ಷಿ ದೂರುದಾರನು ತಲರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಸ್ಥಳೀಯ ವ್ಯಕ್ತಿಗಳಿಂದ ಗುಪ್ತ ಮಾಹಿತಿ ದೊರಕಿರುತ್ತದೆ ಇದೇ ಕಾರಣಕ್ಕಾಗಿ ತನಿಖಾ ಪ್ರಕ್ರಿಯೆಯನ್ನು ಅನುಸರಿಸದೆ ಸಮಾಧಿ ಅಗೆಯುವ ಪ್ರಕ್ರಿಯೆಯನ್ನು ನಡೆಸಲು ಆತುರ ತೋರುತ್ತಿರುವಂತೆ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಸಾಕ್ಷಿದಾರರ ಪರವಾದ ವಕೀಲರಿಗೂ ತಿಳಿಸಲಾಗಿದೆ. ಹಾಗೂ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ.

ಸಾಕ್ಷಿ /ದೂರುದಾರರು ಸಮ್ಮತಿಸಿದಲ್ಲಿ ಆತನ ಬ್ರೈನ್ ಮಾಪಿಂಗ್ ಫಿಂಗರ್ ಪ್ರಿಂಟ್ , ನಾರ್ಕೋ ಅನಾಲಿಸಿಸ್ ಪರೀಕ್ಷೆಗಳನ್ನು ನಡೆಸಲು ತನಿಖಾಧಿಕಾರಿಗಳು ಮಾನ್ಯ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.ಅದೇರೀತಿ ತನಿಖಾಧಿಕಾರಿ ತನಿಖೆಯ ಯಾವ ಹಂತದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಸೂಕ್ತವೆಂದು ನಿರ್ಧರಿಸುತ್ತಾರೋ ಆಗ ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಿಕೊಂಡು ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಬೇಕಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!