- Advertisement -
- Advertisement -
ಸುಳ್ಯ: ವಿದ್ಯಾರ್ಥಿನಿಯೊಂದಿಗೆ ಬಸ್ ನಲ್ಲಿ ಯುವಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆತನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಶ್ಮಿತ್ ಬಂಧಿತ ಆರೋಪಿ.ಕಾಸರಗೋಡಿನ ಅಬ್ದುಲ್ ನಿಯಾಝ್ ಹಲ್ಲೆಗೊಳಗಾದ ಯುವಕ. ಈತನನ್ನು ಕೂಡ ಬಂಧಿಸಲಾಗಿದೆ.
ಇನ್ನು ಬಂಧಿತ ಆರೋಪಿ ಸುಶ್ಮಿತ್ ನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರ್ಷಿತ್ ಚೊಕ್ಕಾಡಿ ಹಾಗೂ ಮಿಥುನ್ ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಇನ್ನು
ಆರೋಪಿ ಸುಶ್ಮಿತ್ ಎಂಬಾತನನ್ನು ಕುಮಟಾದಲ್ಲಿ ಬಂಧಿಸಿದ್ದಾರೆ. ಪೊಲೀಸರು ಆತನನ್ನು ಬಂಧಿಸಿ ಸುಳ್ಯಕ್ಕೆ ಕರೆ ತಂದಿದ್ದು, ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ.ನ್ಯಾಯಾಲಯ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -