Monday, June 8, 2026
Homeಕರಾವಳಿಕಡಬ; ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ; 15ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ...

ಕಡಬ; ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ; 15ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕಡಬ;   ಕಾಣಿಯೂರಿನಲ್ಲಿ‌ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 15 ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಬೆಡ್ ಶೀಟ್ ವ್ಯಾಪಾರಕ್ಕೆ ತೆರಳಿದ ವೇಳೆ ಕಾಣಿಯೂರು ಬಳಿ ಗುಂಪೊಂದು ತಡೆದು ಮಾರಣಾಂತಿಕವಾಗಿ ಹಲ್ಲೆ‌ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು. ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿವಿಧ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದರು.

ಇದಲ್ಲದೆ ಮನೆಗೆ ನುಗ್ಗಿ ಮಹಿಳೆಗೆ ಮಾನಭಂಗಕ್ಕೆ ಯತ್ನ ಎಂದು ಕೂಡ ಸಂತ್ರಸ್ತರ ವಿರುದ್ಧವೇ ಪ್ರತಿದೂರು ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ

- Advertisement -

Latest News

error: Content is protected !!