Tuesday, June 23, 2026
Homeಅಪರಾಧಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ; ಎರಡು ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ

ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ; ಎರಡು ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ

- Advertisement -
- Advertisement -

ಪುತ್ತೂರು: ವ್ಯಕ್ತಿಯೋರ್ವ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯ ಮೇಲೆಮಾನಭಂಗಕ್ಕೆ ಯತ್ನಿಸಿದ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದು, ಇದೀಗ ಪ್ರಕರಣದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರು ಹೆಚ್ಚುವರಿ ಹಿರಿಯ ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ದೇವರಾಜ್‌ ಅರಸ್‌ ವೈ.ಎಚ್‌. ಅವರ ಪೀಠ ತೀರ್ಪು ನೀಡಿದೆ.

ಶಿಕ್ಷೆಗೆ ಒಳಗಾಗಿರುವ ಆರೋಪಿ ಬದ್ರುದ್ದೀನ್‌ ಯಾನೆ ಬದ್ರು. 2022ರ ಸೆ. 14ರಂದು ತಿಂಗಳಾಡಿಯ ನ್ಯೂ ಸೂಪರ್‌ ಬಜಾರ್‌ ಜನರಲ್‌ ಸ್ಟೋರ್‌ ಸ್ವೀಟ್‌ ಸ್ಟಾಲ್‌ ಎಂಬ ಅಂಗಡಿಗೆ ತನ್ನ 7 ವರ್ಷದ ಮಗಳೊಂದಿಗೆ ಬಂದಿದ್ದ ವೇಳೆಯಲ್ಲಿ ಮಹಿಳೆ ತಿಂಡಿ ಖರೀದಿಸಿ ಅಂಗಡಿಯವರಿಗೆ ಹಣವನ್ನು ನೀಡುತ್ತಿದ್ದ ವೇಳೆ ಆರೋಪಿ ಬದ್ರುದ್ದೀನ್‌ ಯಾನೆ ಬದ್ರು ಅಂಗಡಿಯೊಳಗೆ ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಎನ್ನಲಾಗಿದೆ.  ಈ ಕುರಿತು ಮಹಿಳೆ ನೀಡಿದ್ದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿ ವಿರುದ್ಧ ಕಲಂ 354 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣದ ಕುರಿತಂತೆ ಸಂಪ್ಯ ಪೊಲೀಸ್‌ ಠಾಣೆಯ ಆಗಿನ ಎಸ್‌.ಐ. ರಾಮಕೃಷ್ಣ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಇದೀಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಬದ್ರುದ್ದೀನ್‌ ಯಾನೆ ಬದ್ರುಗೆ 2 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿಯು ದಂಡ ತೆರಲು ತಪ್ಪಿದಲ್ಲಿ 6 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ದಂಡದ ಹಣದಲ್ಲಿ 5 ಸಾವಿರ ರೂ. ಅನ್ನು ಸಂತ್ರಸ್ತೆಗೆ ನೀಡುವಂತೆಯೂ ಆದೇಶಿಸಲಾಗಿದೆ.

ಪ್ರಾಸಿಕ್ಯೂಷನ್‌ ಪರ ಸಹಾಯಕ ಸರಕಾರಿ ಅಭಿಯೋಜಕಿ ಚೇತನಾದೇವಿ ಬೋಳೂರು ವಾದಿಸಿದ್ದರು.

- Advertisement -

Latest News

error: Content is protected !!