Saturday, April 27, 2024
Homeಅಪರಾಧನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿದ ಪ್ರಕರಣ; ಲಕ್ಷಗಟ್ಟಲೆ ಪಂಗನಾಮ ಹಾಕಿದ ವಂಚಕರು

ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿದ ಪ್ರಕರಣ; ಲಕ್ಷಗಟ್ಟಲೆ ಪಂಗನಾಮ ಹಾಕಿದ ವಂಚಕರು

spot_img
- Advertisement -
- Advertisement -

ಕಡಬ: ನೆಲ್ಯಾಡಿ, ಕಡಬ, ಉಪ್ಪಿನಂಗಡಿ ಸೇರಿದಂತೆ ಹಲವಾರು ಕಡೆಗಳಲ್ಲಿ ನಕಲಿ ಬಳೆಗಳನ್ನು ಅಡವಿಟ್ಟು ಸಾಲಪಡೆದು ವಂಚಿಸಿರುವ ಘಟನೆ ನಡೆದಿದೆ.

ವಂಚಕನನ್ನು ಕಡಬ ನಿವಾಸಿ ಸೆಬಾಸ್ಟಿಯನ್ ಮತ್ತು ಕೇರಳ ಮೂಲದ ಡಾನಿಶ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಒಡಿಯೂರು ವಿವಿದ್ದೋದ್ದೇಶ ಸೌಹಾರ್ದ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಯಲ್ಲಿ ನಕಲಿ ಬಳೆಗಳನ್ನು ಅಡವಿಟ್ಟು ಸಾಲಪಡೆದು ವಂಚಿಸಿರುವ ಆರೋಪಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆಯಲ್ಲೂ ನಕಲಿ ಬಳೆಗಳನ್ನು ಅಡವಿಟ್ಟು ವಂಚಿಸಿರುವುದು ಬೆಳಕಿಗೆ ಬಂದಿದೆ.

ಈ ವಂಚಕರು ಆರೋಪಿಗಳು ನೆಲ್ಯಾಡಿ, ಕಡಬ, ಉಪ್ಪಿನಂಗಡಿಯಲ್ಲಿ ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದು ಲಕ್ಷಗಟ್ಟಲೆ ಪಂಗನಾಮ ಮಾಡಿದ್ದಾರೆ. ನೆಲ್ಯಾಡಿಯ ಕಾಮಧೇನು ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು 1.40 ಲಕ್ಷ ಸಾಲ, ಉಪ್ಪಿನಂಗಡಿಯ ಒಡಿಯೂರು ಸಹಕಾರಿ ಸಂಘದಲ್ಲಿ 1.70 ಲಕ್ಷ ಸಾಲ, ಕಡಬದ ಅಲಂಕಾರು ಒಕ್ಕಲಿಗ ಸಹಕಾರಿ ಸಂಘಗಳಲ್ಲೂ ನಕಲಿ ಚಿನ್ನ ಅಡವಿಟ್ಟು 1.35 ಲಕ್ಷ ಸಾಲ ಪಡೆದು ವಂಚಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!