Saturday, June 27, 2026
Homeತಾಜಾ ಸುದ್ದಿನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ಸದ್ದು ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್..!

ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ಸದ್ದು ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್..!

- Advertisement -
- Advertisement -

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಸಮೀಪ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಮ್ ಬ್ರ್ಯಾಂಚ್ ಪೊಲೀಸರು ಇಬ್ಬರು ಆರೋಪಿಗಳನ್ನು ಗುಜರಾತ್ ನ ಭುಜ್ ನಲ್ಲಿ ಸೋಮವಾರ ಬಂಧಿಸಿದ್ದಾರೆ.

ಬಂಧಿತರು ವಿಕ್ಕಿ ಗುಪ್ತಾ ಹಾಗೂ ಸಾಗರ್ ಪಾಲ್ ಎಂದು ಗುರುತಿಸಲಾಗಿದೆ.

ಘಟನೆಯ ವಿವರ:ಭಾನುವಾರದಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ಅವರು ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ.ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯಿ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿರುವುದಾಗಿ ಹೇಳಿದ್ದಾರೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ವಾಂಟೆಡ್ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವಾರು ಬೆದರಿಕೆಯನ್ನು ಹಾಕಿದ್ದಾರೆ. ಮೂಲಗಳ ಪ್ರಕಾರ ನಟನನ್ನು ಕೊಲ್ಲಲು ಬಿಷ್ಣೋಯಿ ಮತ್ತು ಬ್ರಾರ್ ತಮ್ಮ ಶೂಟರ್‌ಗಳನ್ನು ಮುಂಬೈಗೆ ಕಳುಹಿಸಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!