Saturday, June 6, 2026
Homeತಾಜಾ ಸುದ್ದಿವಿಟ್ಲ: ಕಾರಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ವಿಟ್ಲ: ಕಾರಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ವಿಟ್ಲ : ಬಂಟ್ವಾಳ ತಾಲೂಕು ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಆಲ್ಟ್ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣದ ಆರೋಪಿಗಳಿಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಕೊಲ್ನಾಡು ಗ್ರಾಮದ ಪಂಜರಕೋಡಿ ನಿವಾಸಿ ಬಶೀರ್ (28) ಮತ್ತು ನೌಫಾಲ್ (24) ಬಂಧಿತ ಆರೋಪಿಗಳು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಶುಕ್ರವಾರ ಆಲ್ಲೊ ಕಾರಿನಲ್ಲಿ ಎರಡು ದನಗಳು ಪತ್ತೆಯಾಗಿದ್ದು ಆರೋಪಿಗಳು ಪರಾರಿಯಾಗಿದ್ದರು, ಪ್ರಕರಣ ಕೈಗೆತ್ತಿಕೊಂಡ ವಿಟ್ಲ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!