- Advertisement -
- Advertisement -
ಮಂಗಳೂರು: 8 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
2021ರಲ್ಲಿ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿ ಬಳಿ ಎಂಟು ವರ್ಷದ ಬಾಲಕಿಯನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಮೂವರು ಆರೋಪಿಗಳು ಅತ್ಯಾಚಾರವೆಸಗಿ ಹತ್ಯೆಗೈದಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣದಡಿ ಮೂವರನ್ನು ಬಂಧಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕರಾದ ಜಾನ್ಸನ್ ಡಿಸೋಜಾ ರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣದ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಘನ ನ್ಯಾಯಾಲಯದ ನ್ಯಾಯಾದೀಶ ಮಾನು, ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿ ಆದೇಶ ಹೊರಡಿಸಿದೆ.
- Advertisement -