Saturday, May 18, 2024
Homeಅಪರಾಧಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

spot_img
- Advertisement -
- Advertisement -

ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಒಂದು ವರ್ಷ ಕಾಲ ಅತ್ಯಾಚಾರ ಎಸಗಿದವನ ಮೇಲಿನ ಆರೋಪ ಸಾಬೀತಾಗದೆ. ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ, ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್ಳರ ಮಜಲು ಮನೆಯ ಪ್ರಸಾದ್‌ (31) ಎಂದು ತಿಳಿಸಲಾಗಿದೆ.

ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಪ್ರಸಾದ್‌ ಮನೆಗೆ ಆತನ ಸಂಬಂಧಿಕ 17 ವರ್ಷದ ಬಾಲಕಿ ಮನೆ ಕೆಲಸಕ್ಕಾಗಿ ಆಗಿಂದಾಗೆ ಬರುತ್ತಿದ್ದು, 2018 ಜು. 28ರಂದು ಆಕೆ ಮನೆಗೆ ಬಂದಾಗ ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ಆ ಬಳಿಕ ಪದೇ ಪದೇ ಆತ ಅತ್ಯಾಚಾರವೆಸಗಿದ್ದ.

ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಒಮ್ಮೆ ಆಕೆ ತಿರಸ್ಕರಿಸಿದಾಗ ಆತ ಆಕೆಯ ಮೇಲೆ ಹಲ್ಲೆ ನಡೆಸಿದ್ದ. ಬಾಲಕಿಯ ತಾಯಿ ಮತ್ತು ಅಣ್ಣನಿಗೆ ವಿಷಯ ಗೊತ್ತಾಗಿತ್ತು. ಬಳಿಕ ಮನೆಮಂದಿಯ ಸಲಹೆಯಂತೆ ಬಾಲಕಿ 2019ರ ಜೂ. 13ರಂದು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಳು. ಪೊಲೀಸರು ಆರೋಪಿ ಪ್ರಸಾದ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

- Advertisement -
spot_img

Latest News

error: Content is protected !!