Saturday, June 6, 2026
Homeಕರಾವಳಿಪುತ್ತೂರು; ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ; ಯುವಕನ ವಿರುದ್ಧ ದೂರು ದಾಖಲು

ಪುತ್ತೂರು; ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ; ಯುವಕನ ವಿರುದ್ಧ ದೂರು ದಾಖಲು

- Advertisement -
- Advertisement -

ಪುತ್ತೂರು :  ವಿದ್ಯಾರ್ಥಿಯೊಬ್ಬಳು ಅಪ್ರಾಪ್ತೆಯಾಗಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೋಡಿಯಡ್ಕ ನಿವಾಸಿ ಪರ್ಲಡ್ಕದಲ್ಲಿ ಕೋಳಿ ಅಂಗಡಿ ಹೊಂದಿರುವ ರಾಹುಲ್‌ ಎಂಬಾತನ ವಿರುದ್ಧ ಸಂಪ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಾಗಿದೆ.

ಪುತ್ತೂರು ನಿವಾಸಿ, ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಈಗ ಪ್ರಾಪ್ತ ವಯಸ್ಕಳಾಗಿದ್ದು, ಈ ಹಿಂದೆ ಅಪ್ರಾಪ್ತ ವಯಸ್ಕಳಾಗಿದ್ದಾಗ ರಾಹುಲ್‌ ಆಕೆಗೆ ಕೋಳಿ ಫಾರಂನಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಹುಲ್‌ ಆಕೆಯ ಚಾರಿತ್ರ್ಯ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ವಿದ್ಯಾರ್ಥಿನಿ ತಡವಾಗಿ ದೂರು ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!