Tuesday, May 14, 2024
Homeಅಪರಾಧಕಡಬ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಗರ್ಭಿಣಿಯಾಗಿಸಿದ್ದ ಸಂಬಂಧಿಕನ ಬಂಧನ!

ಕಡಬ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಗರ್ಭಿಣಿಯಾಗಿಸಿದ್ದ ಸಂಬಂಧಿಕನ ಬಂಧನ!

spot_img
- Advertisement -
- Advertisement -

ಕಡಬ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಯೋರ್ವನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ ಘಟನೆ ಕೋಡಿಂಬಾಳ ಗ್ರಾಮದಲ್ಲಿ ನಡೆದಿದೆ .

ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಬಂಧಿತ ಆರೋಪಿ. ಕಳೆದ ಒಂದೂವರೆ ವರ್ಷದಿಂದ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾದಗ ಪ್ರಕರಣ ಬೆಳಕಿಗೆ ಬಂದಿದೆ.

2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ ಎಂದು ಹೇಳಲಾಗಿದ್ದು, ಗರ್ಭವತಿಯಾದ ಬಗ್ಗೆ ಬಾಲಕಿ ಯಾರಿಗೂ ಮಾಹಿತಿ ನೀಡಿರಲಿಲ್ಲ. ಒಂದು ದಿನ ಆಕೆ ಅಸ್ವಸ್ಥಗೊಂಡಿದ್ದು, ಈ ಸಂಬಂಧ ತಪಾಸಣೆಗಾಗಿ ತನ್ನ ಅಜ್ಜಿಯೊಂದಿಗೆ ಕಡಬ ಸಮುದಾಯ ಆಸ್ಪತ್ರೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಗರ್ಭಿಣಿಯಾಗಿರುವ ವಿಚಾರ ವೈದ್ಯರಿಂದ ತಿಳಿದ ಬಳಿಕ ಹೆಚ್ಚಿನ ಪರೀಕ್ಷೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷೆ ನಡೆಸಿದಾಗ ಬಾಲಕಿ ಒಂದೂವರೆ ತಿಂಗಳ ಗರ್ಭಿಣಿ ಎಂಬುದು ದೃಢಪಟ್ಟಿದೆ.

- Advertisement -
spot_img

Latest News

error: Content is protected !!