Monday, May 20, 2024
Homeಕರಾವಳಿಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

spot_img
- Advertisement -
- Advertisement -

ಮಂಗಳೂರು: ಮೇ 8 ರಂದು ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೀಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.

ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ 8 ರಂದು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯ ಮಾಹಿತಿಯ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಅತ್ಯಂತ ಗಂಭೀರವಾಗಿದೆ.

ಈ ಕೃತ್ಯ ನಡೆಸಿದ ಬಾಲಕನ ಹಿಂದೆ ವ್ಯವಸ್ಥಿತ ತಂಡ ಇರಬಹುದು ಎಂಬ ಊಹೆಯಿದ್ದು, ಅದೇ ತಂಡ ಆತನನ್ನು ಇಂತಹ ಕೃತ್ಯಕ್ಕೆ ಪ್ರೇರೇಪಿಸುವ ಸಾಧ್ಯತೆ ಇದೆ ಎಂದು ಸಂಶಯ ವ್ಯಕ್ತವಾಗಿದೆ.

ಹಿಂದೆ ಉಡುಪಿಯಲ್ಲಿ ಇಂತಹ ಘಟನೆ ನಡೆದಿದ್ದು ಆ ಘಟನೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡವಿತ್ತು. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು ಅಲ್ಲದೆ ಈ ಕೃತ್ಯ ನಡೆಸಿರುವವನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ ಮತ್ತು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!