Saturday, June 6, 2026
Homeಕರಾವಳಿಉಡುಪಿಉಡುಪಿ: ಗಾಂಜಾ ಕೇಸ್: ಒಂದೇ ತಿಂಗಳಲ್ಲಿ 100 ಮಂದಿಯ ವಿರುದ್ಧ ಪ್ರಕರಣ ದಾಖಲು

ಉಡುಪಿ: ಗಾಂಜಾ ಕೇಸ್: ಒಂದೇ ತಿಂಗಳಲ್ಲಿ 100 ಮಂದಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಸಾಗಾಟ ನಿಯಂತ್ರಿಸಲು ಜಿಲ್ಲಾ ಪೊಲೀಸ್‌ ಇಲಾಖೆ ಚುರುಕಿನ ಕಾರ್ಯಾಚರನೆ ನಡೆಸ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಈ ಸಂಬಂಧ ಬರೋಬ್ಬರಿ 100 ಮಂದಿಯ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನಿಗಾ ಇರಿಸಲಾಗಿದೆ.

ಆಗಸ್ಟ್ 17ರಂದು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಹಾಕಿ ಅಕ್ಷಯ್ ಮಚ್ಚಿಂದ್ರ ಜಿಲ್ಲೆಯಲ್ಲಿ ಡ್ರಗ್ ಮಾಫಿಯಾ ಮಟ್ಟಹಾಕುವ ಭರವಸೆ ನೀಡಿದ್ದರು. ಅದರಂತೆ, ಅಧಿಕಾರ ಸ್ವೀಕರಿಸಿ ಒಂದು ತಿಂಗಳಲ್ಲಿ ಎನ್‌ಡಿಪಿಎಸ್ ಪ್ರಕರಣಗಳ ಸಂಖ್ಯೆ ಶತಕದ ಗಡಿ ತಲುಪಿದೆ.

- Advertisement -

Latest News

error: Content is protected !!