Friday, October 4, 2024
Homeತಾಜಾ ಸುದ್ದಿಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಪ್ರಕರಣ; ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಪ್ರಕರಣ; ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

spot_img
- Advertisement -
- Advertisement -

ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಿಳೆಯನ್ನು 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯನ್ನು ಕೊಲೆ ಮಾಡಿ 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಪರಾರಿಯಾದ ಆರೋಪಿಯ ಫೋಟೋ ಪತ್ತೆಯಾಗಿದ್ದು, ಹಂತಕನನ್ನು ಒರಿಸ್ಸಾ ಮೂಲದ ಮಹಾಲಕ್ಷ್ಮಿಯ ಸಹೋದ್ಯೋಗಿ ಮುಕ್ತಿ ರಂಜನ್ ರಾಯ್ ಎಂದು ಗುರುತಿಸಲಾಗಿದೆ.

ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಹೆಬ್ಬಗೋಡಿಯಲ್ಲಿ ನೆಲೆಸಿದ್ದನು. ತಮ್ಮನೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಿದ್ದು ಪ್ರತಿನಿತ್ಯ ಮಲ್ಲೇಶ್ವರಂನ ಫ್ಯಾಶನ್ ಫ್ಯಾಕ್ಟರಿಯಲ್ಲಿ ಟೀಂ ಹೆಡ್‌ ಆಗಿ ಕೆಲಸ ಮಾಡುತ್ತಿದ್ದನು. ಈ ವೇಳೆ ಅದೇ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮಿಯನ್ನ ರಂಜನ್ ಪ್ರೀತಿಸುತ್ತಿದ್ದನು.

ಆದರೆ ಇಬ್ಬರ ಮಧ್ಯ ಅದೇನು ಮನಸ್ತಾಪ ಉಂಟಾಯಿತು ಗೊತ್ತಿಲ್ಲ. ಸೆಪ್ಟೆಂಬರ್ 1 ರಂದು ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್ ಇಬ್ಬರು ಕೆಲಸಕ್ಕೆ ಹಾಜರಾಗಿದ್ದಾರೆ. ಬಳಿಕ ಸೆಪ್ಟೆಂಬರ್ 2ರಿಂದ ಮಹಾಲಕ್ಷ್ಮಿ ವಾರದ ರಜೆ ತೆಗೆದುಕೊಂಡಿದ್ದಾಳೆ. ಸೆಪ್ಟೆಂಬರ್ 2ರಂದು ತಾಯಿಯನ್ನು ಭೇಟಿಯಾಗಲು ತಾಯಿಯ ಮನೆಗೆ ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.ಆದರೆ ಅಷ್ಟರಲ್ಲಿ ಆರೋಪಿ ಮುಕ್ತಿ ರಂಜನ್ ಮಹಾಲಕ್ಷ್ಮಿಯ ಕಥೆ ಮುಗಿಸಿದ್ದಾನೆ.ಆಕೆಯನ್ನು ಭೀಕರವಾಗಿ ಕೊಂದು ತುಂಡು ತುಂಡಾಗಿ ಕತ್ತರಿಸಿ, ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಆಕೆಯ ಮೃತ ದೇಹವನ್ನು ಕತ್ತರಿಸಿ ಫ್ರಿಜ್ ನಲ್ಲಿ ಇಟ್ಟು ಪರಾರಿಯಾಗಿದ್ದಾನೆ. ಸದ್ಯ ಆರೋಪಿ ಮುಕ್ತಿ ರಂಜನ್ ಪಶ್ಚಿಮ ಬಂಗಾಳದಲ್ಲಿ ಇದ್ದು ಪೊಲೀಸರಿಂದ ಕಣ್ತಪ್ಪಿಸಿ ಓಡಾಡುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -
spot_img

Latest News

error: Content is protected !!