Sunday, June 7, 2026
Homeತಾಜಾ ಸುದ್ದಿಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ

ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ

- Advertisement -
- Advertisement -

ಚಿಕ್ಕಬಳ್ಳಾಪುರ:  ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಗ್ರಾಮದ ಮಧ್ಯದಲ್ಲೇ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ಯುವಕ ಗಜೇಂದ್ರ (28).

ಗಜೇಂದ್ರ ವೃತ್ತಿಯಲ್ಲಿ ಚಾಲಕನಾಗಿದ್ದ. ಗ್ರಾಮದ ಎಂಎಸ್‌ಐಎಲ್ ಮದ್ಯದಂಗಡಿ ಬಳಿ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯು ಯಾವ ವಿಚಾರಕ್ಕೆ ನಡೆದಿದೆ ಎಂದು ತಿಳಿದು ಬಂದಿಲ್ಲ.

ನಡುರಸ್ತೆಯಲ್ಲಿ ಗಜೇಂದ್ರ ರಕ್ತಸಿಕ್ತವಾಗಿ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಜನರು ನಡುರಸ್ತೆಯಲ್ಲಿ ಮೃತದೇಹ ಕಂಡು ಬೆಚ್ಚಿ ಬಿದ್ದಿದ್ದು, ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!