Thursday, June 4, 2026
Homeಅಪರಾಧಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಿಟಿ ಬಸ್ ಚಾಲಕ

ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಿಟಿ ಬಸ್ ಚಾಲಕ

- Advertisement -
- Advertisement -

ಉಳ್ಳಾಲ: ಸೋಮೇಶ್ವರ ಸಮುದ್ರಕ್ಕೆ ಹಾರಿ ಸಿಟಿ ಬಸ್ಸಿನ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ. ಇವರು ಸ್ಟೇಟ್ ಬ್ಯಾಂಕ್ ನಿಂದ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಜಗದೀಶ್ ಅವರು ಸೋಮೇಶ್ವರದ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಮುದ್ರ ತೀರದಲ್ಲಿ ಬೈಕ್, ಟವಲೊಂದರಲ್ಲಿ ಬೈಕ್ ಕೀ, ಪರ್ಸ್ ಚಪ್ಪಲಿಗಳನ್ನು ತೆಗೆದಿಟ್ಟಿದ್ದಾರೆ. ಇನ್ನು ಅವಿವಾಹಿತರಾಗಿರುವ ಜಗದೀಶ್ ಅವರ ಪರ್ಸ್‌ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ. ಇವರ ತಂದೆ ಕೂಡ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!