ಪುತ್ತೂರು; ಸಂತ್ರಸ್ತ ಬಾಲಕಿ ತನ್ನ ತಾಯಿ ಹಾಗೂ ತಂಗಿಯೊಂದಿಗೆ ವಾಸವಾಗಿರುವ ಬಾಲಕಿಯನ್ನು ಆರೋಪಿಯೊಬ್ಬ ಗುಡ್ಡ ಪ್ರದೇಶಕ್ಕೆ ಬರುವಂತೆ ಹೇಳಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಬಗ್ಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಅದರಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ವಾಸ್ತವ್ಯವಿರುವ ಬಾಲಕಿಯೊಬ್ಬಳು 2025 ನೇ ಮಾರ್ಚ್ ನಿಂದ ಒಬ್ಬಾತನಿಗೆ ತನ್ನ ತಾಯಿಯ ಮೊಬೈಲ್‌ನಿಂದ ಫೋನ್ ಕರೆ ಮಾಡಿ ಮಾತನಾಡುತ್ತಿದ್ದಳು. ಒಂದು ದಿನ ಬಾಲಕಿಯನ್ನು ಭೇಟಿಯಾಗಲು ರೈಲ್ವೇ ಟ್ರಾಕ್ ಬಳಿ ಗುಡ್ಡ ಪ್ರದೇಶಕ್ಕೆ ಬರುವಂತೆ ತಿಳಿಸಿ ಬಾಲಕಿ ಸ್ಥಳಕ್ಕೆ ಬಂದಾಗ ಬಲವಂತದಿಂದ ದೈಹಿಕ ಸಂಪರ್ಕ ಮಾಡಿದ್ದು, ಬಳಿಕವೂ ಆರೋಪಿ ಗುಡ್ಡ ಪ್ರದೇಶಕ್ಕೆ ಬರುವಂತೆ ಹೇಳಿ ಅನೇಕ ಬಾರಿ ಬಲವಂತದಿಂದ ದೈಹಿಕ ಸಂಪರ್ಕ ಮಾಡಿರುವುದಾಗಿ ಸಂತ್ರಸ್ತ ಬಾಲಕಿ ನೀಡಿದ ದೂರಿನಂತೆ ದ.ಕ ಮಹಿಳಾ ಪೊಲೀಸ್ ಠಾಣೆ. ಅ.ಕ್ರ: 63/2025 ಕಲಂ64(2) (ಎಮ್), 351(3) BNS 2023 & ಕಲಂ 5(ಎಲ್) ಜೊತೆಗೆ 6, POCSO Act ಹಾಗೂ ಇತರ ಕಲಂ ನಂತೆ ಪ್ರಕರಣ ದಾಖಾಲಿಸಿಕೊಂಡು ತನಿಖೆ ನಡೆಸಲಾಗಿದ್ದು, ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಲಯಕ್ಕೆ ಹಾಜರು ಪಡಿಸಿದ್ದು ಮಾನ್ಯ ನ್ಯಾಯಲಯವು ದಿನಾಂಕ 09-09-2025 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.


