Thursday, April 24, 2025
Homeತಾಜಾ ಸುದ್ದಿಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಸಿಎಂ ಶೂ ಲೇಸ್ ಕಟ್ಟಿದ ಕಾಂಗ್ರೆಸ್ ಕಾರ್ಯಕರ್ತ; ಮತ್ತೊಂದು ವಿವಾದ ಸುಳಿಯಲ್ಲಿ...

ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಸಿಎಂ ಶೂ ಲೇಸ್ ಕಟ್ಟಿದ ಕಾಂಗ್ರೆಸ್ ಕಾರ್ಯಕರ್ತ; ಮತ್ತೊಂದು ವಿವಾದ ಸುಳಿಯಲ್ಲಿ ಸಿಎಂ ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇದೀಗ ಮತ್ತೊಂದು ವಿವಾದದ ಸುಳಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಸಿಎಂ ಶೂ ಲೇಸ್ ಕಟ್ಟಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ ಎಂಬುದಾಗಿ ಕಿಡಿಕಾರಿದ್ದಾರೆ.

ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.ಈ ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಭಾರತೀಯರ ಕ್ಷಮೆ ಕೇಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!