Wednesday, June 24, 2026
Homeಕರಾವಳಿಮಂಗಳೂರುಪುತ್ತೂರು; ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಜಿಲ್ಲೆಯಿಂದ ಗಡಿಪಾರು ಮಾಡಲು ಷಡ್ಯಂತ್ರ ಮಾಡಲಾಗುತ್ತಿದೆ; ಸೌಜನ್ಯಪರ...

ಪುತ್ತೂರು; ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಜಿಲ್ಲೆಯಿಂದ ಗಡಿಪಾರು ಮಾಡಲು ಷಡ್ಯಂತ್ರ ಮಾಡಲಾಗುತ್ತಿದೆ; ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ

- Advertisement -
- Advertisement -

ಪುತ್ತೂರು; ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಜಿಲ್ಲೆಯಿಂದ ಗಡಿಪಾರು ಮಾಡಲು ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

ಪುತ್ತೂರಿನಲ್ಲಿ ಗಡಿಪಾರು ವಿಚಾರಣೆಗೆ ಹಾಜರಾದ ಬಳಿಕ ಮಾತನಾಡಿದ ಅವರು ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಜಿಲ್ಲೆಯಿಂದ ಗಡಿಪಾರು ಮಾಡಲು ಷಡ್ಯಂತ್ರ ಮಾಡಲಾಗುತ್ತಿದೆ. ಸೌಜನ್ಯ ಪರ ಹೋರಾಟದಲ್ಲಿ ನಾನು ಮಾಡಿದ ಎಲ್ಲಾ ಆರೋಪಗಳೂ ಸತ್ಯ, ಅಲ್ಲಿ ಅತ್ಯಾಚಾರ, ಅನಾಚಾರ, ದೀನದಲಿತರ ಭೂಮಿ ಕಬಳಿಸಿದ್ದು,ಬಡ್ಡಿ ವ್ಯವಹಾರ ಮಾಡಿದ್ದೆಲ್ಲವೂ ಸತ್ಯ ಇದಕ್ಕೆ ಶಿಕ್ಷೆ ಆಗಲೇ ಬೇಕಿದೆ. ಮಹಾಲಿಂಗೇಶ್ವರ ದೇವರು ಇವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಮಹೇಶ್ ತಿಮರೋಡಿ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ನಾನು ಮತ್ತು ಚಿನ್ನಯ್ಯ ಆದಿಚುಂಚನಗಿರಿ ಮಠಕ್ಕೆ ಹೋಗಿರೋದು ಸತ್ಯ, ಈ ವೇಳೆ ನಮ್ಮ ಜೊತೆಗೆ ಸೌಜನ್ಯನ ಮನೆಯವರಿದ್ದರು. ಸೌಜನ್ಯ ಪರ ಹೋರಾಟಗಾರರಿದ್ದರು. ಈ ವೇಳೆ ಆದಿಚುಂಚನಗಿರಿ ಮಠದಲ್ಲಿ ಒಂದೂವರೆ ಗಂಟೆ ಕಾಲ ಸ್ವಾಮೀಜಿಯ ಮುಂದೆಯೇ ಚಿನ್ನಯ್ಯ ಎಲ್ಲವನ್ನೂ ಅವನು ಬಿಡಿಸಿ ಹೇಳಿದ್ದಾನೆ. ನಾನು ಬಿಡುಗಡೆ ಮಾಡಿದ ಒಂದೂವರೆ ಗಂಟೆಯ ವಿಡಿಯೋಕ್ಕಿಂತ ಜಾಸ್ತಿಯೇ ಅಲ್ಲಿ ಮಾತನಾಡಿದ್ದಾನೆ. ಯಾರ್ಯಾರು ಅತ್ಯಾಚಾರ ಮಾಡಿದ್ದಾರೆ, ಮಾಡಿಸಿದ್ದಾರೆ ಎಲ್ಲವನ್ನೂ ಹೇಳಿದ್ದಾನೆ. ಸ್ವಾಮೀಜಿಗಳು ಯಾಕೆ ಈ ವಿಚಾರವನ್ನು ಸಮಾಜದ ಮುಂದೆ ಹೇಳುತ್ತಿಲ್ಲ. ಸ್ವಾಮೀಜಿ ಸ್ವತ ಈ ವಿಚಾರವನ್ನು ಮುಖ್ಯಮಂತ್ರಿಗಳಲ್ಲಿ ಹೇಳಿ ಶಿಕ್ಷೆ ಕೊಡಿಸುತ್ತೇನೆ ಎಂದಿದ್ದರು, ಮಹಾಕಾಳನ ಮೇಲೆ ಪ್ರಮಾಣ ಮಾಡಿದ್ದಾರೆ. ಶಿಕ್ಷೆ ಕೊಡಿಸಿಯೇ ಕೊಡಿಸುತ್ತೇನೆಂದು, ಈಗ ಸ್ವಾಮೀಜಿಗಳು ನ್ಯಾಯ ಕೊಡಿಸಲಿ, ಅದು ಬಿಟ್ಟು ಮಠದಲ್ಲಿ ಕುಳಿತು ರಾಜಕೀಯ ಮಾಡುವುದಲ್ಲ ಎಂದಿದ್ದಾರೆ.

ನಮಗೆ ಯಾರ ಮೇಲೆಯೂ ನಂಬಿಕೆ ಇಲ್ಲದಂತೆ ಆಗಿದೆ, ಮಾಧ್ಯಮ, ಕಾರ್ಯಾಂಗ ಯಾವುದರ ಮೇಲೆಯೂ ನಂಬಿಕೆಯಿಲ್ಲ ಆದರೆ ದೇಶದ ಕಾನೂನಿನ ಮೇಲೆ ಮಾತ್ರ ನಮಗೆ ನಂಬಿಕೆ ಇರೋದು, ಮುಂದಿನ ದಿನಗಳಲ್ಲಿ ಕಾನೂನು ಮೂಲಕವೇ ನಾವು ಹೋರಾಟವನ್ನು ಮಾಡುತ್ತೇವೆ. SIT ತನಿಖೆಯ ವರದಿ ಕೊಟ್ಟಿದೆ, ಅದು ಚಾರ್ಜ್ ಶೀಟ್ ಅಲ್ಲ, ಹೆಣ್ಣುಮಕ್ಕಳಿಗಾಗಿ ಹೋರಾಟ ಮಾಡುತ್ತಿದ್ದೇವೆ ಆದರೆ ಪೊಲೀಸರು ನನ್ನ ಗಡಿಪಾರು ಆದೇಶದಲ್ಲಿ ಹೆಣ್ಣುಮಕ್ಕಳಿಗೆ ದೌರ್ಜನ್ಯ ಮಾಡಿದ್ದೇವೆ ಎಂದು ಸೇರಿಸಿದ್ದಾರೆ , ಎಂತಹ ಪಾಪಿ ಪೋಲೀಸರು ಇದ್ದಾರೆ ಎಂದು ಆಕ್ರೋಶ ವ್ಯಹೊರ ಹಾಕಿದ್ದಾರೆ.

- Advertisement -

Latest News

error: Content is protected !!