Friday, April 19, 2024
Homeಕರಾವಳಿಹಿಂದೂಗಳ ಮೇಲೆ ದಾಳಿಯಾದಾಗ ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ, ಇನ್ನು ನೀವು ಯಾವ ಲೆಕ್ಕ?; ಧರ್ಮೇಂದ್ರ

ಹಿಂದೂಗಳ ಮೇಲೆ ದಾಳಿಯಾದಾಗ ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ, ಇನ್ನು ನೀವು ಯಾವ ಲೆಕ್ಕ?; ಧರ್ಮೇಂದ್ರ

spot_img
- Advertisement -
- Advertisement -

ಮಂಗಳೂರು: ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ, ಇನ್ನು ನೀವು ಯಾವ ಲೆಕ್ಕ ನಮಗೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಮಂಗಳೂರಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ, “ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಹತ್ಯೆ ಮಾಡೋಕೆ ಆಗುತ್ತೆ, ಇನ್ನು ನಿಮ್ಮ ಬಗ್ಗೆ ಆಲೋಚನೆ ಮಾಡುವುದಕ್ಕೆ ಸಾಧ್ಯ ಇಲ್ವಾ,” ಎಂದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗವಾಗಿ ಬೆದರಿಕೆಯನ್ನು ಹಾಕಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿ ರೆಡಿ ಮಾಡಲಾಗಿದೆ. ಆದರೆ ಇತಿಹಾಸದಲ್ಲಿ ಒಂದೇ ಒಂದು ಮಸೀದಿ, ಚರ್ಚ್ ಒಡೆದದ್ದನ್ನು ತೋರಿಸಲಿ. ಅದ್ಯಾಕೆ ದೇವಸ್ಥಾನಗಳೇ ಟಾರ್ಗೆಟ್ ಆಗುತ್ತಿದೆ. ನಾವೇನು ಸುಮ್ಮನೇ ಕೂತಿದ್ದೀವಿ ಎಂದು ಭಾವಿಸಿದ್ದೀರಾ? ಎಂದು ಧರ್ಮೇಂದ್ರ ಪ್ರಶ್ನಿಸಿದರು.

“ರಾಜ್ಯ ಬಿಜೆಪಿ ಸರ್ಕಾರದ ನಾಯಕರು ದೇಗುಲ ಧ್ವಂಸ ಮಾಡಿರುವುದು ಸಣ್ಣ ತಪ್ಪು ಅಂತಾ ಹೇಳುತ್ತಾರೆ. ದೇಗುಲ ಧ್ವಂಸ ಮಾಡಿರುವುದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು? ದೇವಸ್ಥಾನವನ್ನು ಮರು ನಿರ್ಮಾಣ ಮಾಡುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಯಾರ ಹಣದಲ್ಲಿ ದೇಗುಲ ನಿರ್ಮಾಣ ಮಾಡುತ್ತೀರಿ? ಜನರ ತೆರಿಗೆ ಹಣದಲ್ಲಿ ದೇವಸ್ಥಾನ ಮರು‌ನಿರ್ಮಾಣ ಮಾಡುತ್ತೀರಾ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಗುಲ ಧ್ವಂಸ ಮಾಡಿರುವುದು ಒಂದು ಕೊಲೆಗೆ ಸಮಾನ. ಆಗಮ ಶಾಸ್ತ್ರದ ಪ್ರಕಾರ ದೇವಸ್ಥಾನವನ್ನು ಮರು ನಿರ್ಮಾಣ ಮಾಡಬೇಕು,” ಅಂತಾ ಆಗ್ರಹಿಸಿದ್ದಾರೆ.

ಧಾರ್ಮಿಕ ಕೇಂದ್ರಗಳ ತೆರವಿಗೆ ಅಖಿಲ ಭಾರತ ಹಿಂದೂ ಮಹಾಸಭಾ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಅವರು ತಿಳಿಸಿದರು.

- Advertisement -
spot_img

Latest News

error: Content is protected !!