Thursday, June 25, 2026
Homeಕರಾವಳಿಮಂಗಳೂರುಹಣದಾಸೆಗೆ ತನ್ನ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ; ಬಾಲಕಿಯ ತಂದೆ, ದಕ್ಷಿಣಕನ್ನಡ ಜಿಲ್ಲೆಯ...

ಹಣದಾಸೆಗೆ ತನ್ನ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ; ಬಾಲಕಿಯ ತಂದೆ, ದಕ್ಷಿಣಕನ್ನಡ ಜಿಲ್ಲೆಯ ವೇಶ್ಯಾವಾಟಿಕೆಯ ಕಿಂಗ್ ಪಿನ್ ಭರತ್ ಶೆಟ್ಟಿ ಸೇರಿ 12 ಜನರ ಬಂಧನ

- Advertisement -
- Advertisement -

ಚಿಕ್ಕಮಗಳೂರು; ನಿಜಕ್ಕೂ ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಘಟಡನೆ. ನಿಜಕ್ಕೂ ಇಂತಹ ಅಪ್ಪಂದಿರು ಇರೋದಕ್ಕಿಂತ ಅಪ್ಪ ಇಲ್ಲದೇ ಅನಾಥರಾಗಿ ಬೆಳೆಯೋದೇ ಬೆಸ್ಟ್ ಅನ್ಸುತ್ತೆ. ಅಂತಹ ಹೀನ ಘಟನೆಯೊಂದಕ್ಕೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೀರೂರು ಗ್ರಾಮದಲ್ಲಿ ನಡೆದಿದೆ.

ಹೆತ್ತ ಅಪ್ಪನೇ ಮಗಳನ್ನು ವೇಶ್ಯಾವಾಟಿಕೆ ತಳ್ಳಿದ್ದಾನೆ. ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ಬಿದ್ದ ತಂದೆಯೊಬ್ಬ ಮಗಳನ್ನು ನರ ರಕ್ಕಸರ ಕೈಗೆ ಒಪ್ಪಿಸಿದ್ದಾನೆ.  . ತಾಯಿಯನ್ನು ಕಳೆದುಕೊಂಡು ಸಂಬಂಧಿಕರ ಮನೆಯಲ್ಲಿದ್ದ ಅಪ್ರಾಪ್ತೆ, PUC ವರೆಗೂ ವಿದ್ಯಾಭ್ಯಾಸ ಮುಗಿಸಿದ ನಂತರ ತಂದೆ ಮನೆಗೆ ಮರಳಿದ್ದಳು. ಈ ವೇಳೆ ಡಿಸೆಂಬರ್​ನಲ್ಲಿ ತಂದೆಯೊಂದಿಗೆ ಅಜ್ಜಿಯ ಮನೆಗೆ ಹೋಗಿ 2 ದಿನ ಉಳಿದು ಬಂದಿದ್ದಳು. ಮತ್ತೊಮ್ಮೆ ಅಜ್ಜಿ ಕರೆಯುತ್ತಿದ್ದಾರೆಂದು ಅಲ್ಲಿಗೆ ಹೋದ ಆಕೆಗೆ ಅದೇ ಕಂಟಕವಾಗಿದೆ. ಬಾಲಕಿ ಅಜ್ಜಿಯ ಮನೆಯಲ್ಲಿದ್ದಾಗ ಅಲ್ಲಿಗೆ ಬಂದಿದ್ದ ದಕ್ಷಿಣಕನ್ನಡ ಜಿಲ್ಲೆಯ ವೇಶ್ಯಾವಾಟಿಕೆ ಜಾಲದ ಕಿಂಗ್ ಪಿನ್ ಭರತ್ ಶೆಟ್ಟಿ ತಂದೆ- ಮಗಳೊಡನೆ ಸಲುಗೆ ಬೆಳೆಸಿದ್ದ. ಆತನ ಮನೆಗೆ ಬಂದು ತಂಗುವಂತೆಯೂ ತಿಳಿಸಿದ್ದ.ಅದರಂತೆ

ಇದಕ್ಕೊಪ್ಪಿದ್ದ ತಂದೆ ಮಗಳಿಬ್ಬರೂ ಭರತ್​ನೊಂದಿಗೆ ಮಂಗಳೂರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ಬಾಲಕಿ ತಾನು ಮುಟ್ಟಾಗಿರುವುದಾಗಿ ತಂದೆಗೆ ತಿಳಿಸಿದ್ದಳು. ಆದಾಗಿಯೂ ಮರುದಿನ ಅಪ್ರಾಪ್ತೆ ಬಳಿ ಬಂದ ಭರತ್, 4-5 ಜನ ಬರುತ್ತಾರೆ, ಅವರೊಂದಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಅವನ ಮಾತಿನಂತೆ 20ರಿಂದ ಹಿಡಿದು 45 ವರ್ಷ ವಯೋಮಿತಿಯ ನಾಲ್ವರು ಒಬ್ಬರಾದ ಮೇಲೊಬ್ಬರಂತೆ ಆಕೆಯನ್ನು ಲೈಂಗಿಕವಾಗಿ ಶೋಷಿಸಿದ್ದರು. ಇದಾದ ಮರುದಿನವೂ ಇದೇ ಕೆಲಸಕ್ಕೆ ಒತ್ತಾಯಿಸಿದಾಗ ಹುಡುಗಿ ನಿರಾಕರಿಸಿದರೂ ಮತ್ತೊಮ್ಮೆ ಆಕೆಯ ಮೇಲೆ ಅದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ವೇಳೆ ನಾನು ಅಪ್ರಾಪ್ತೆ, ನನ್ನನ್ನು ಬಿಡಿ ಎಂದು ಎಷ್ಟೇ ಅಂಗಲಾಚಿದರೂ ಕೇಳದ ಕಾಮುಕರು, ನಾವು ಭರತ್ ಶೆಟ್ಟಿಗೆ ಹಣ ನೀಡಿದ್ದೇವೆಂದು ಹೇಳಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು.

ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ FIR ದಾಖಲಾಗಿದ್ದು, ಬಾಲಕಿಯ ತಂದೆ, ಅಜ್ಜಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾಂಸ ದಂಧೆಯ ಕಿಂಗ್‌ಪಿನ್ ಎನ್ನಲಾಗಿರುವ ಭರತ್ ಶೆಟ್ಟಿ ಸೇರಿದಂತೆ ಒಟ್ಟು 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಭರತ್ ಶೆಟ್ಟಿಯ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ವೇಶ್ಯಾವಾಟಿಕೆ ಸಂಬಂಧ 8ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇನ್ನಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!