Tuesday, May 7, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ

ಉಡುಪಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ

spot_img
- Advertisement -
- Advertisement -

ಉಡುಪಿ: ಇಂದು ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಅವಧಿಯಲ್ಲಿ ಮಹಿಷ ದಸರಾ ಆಚರಣೆಯ ಪರ ಅಥವಾ ವಿರೋಧದ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವು ದನ್ನು, ಮೆರವಣಿಗೆ ನಡೆಸಿ ಘೋಷಣೆ ಕೂಗುವುದನ್ನು, ಪ್ರಚೋದನಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!