Thursday, June 25, 2026
Homeಕರಾವಳಿಉಡುಪಿಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ, ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ, ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಹಾರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಸಂಭವಿಸಿದೆ. ಕಾವ್ರಾಡಿ ಗ್ರಾಮದ ನೆಲ್ಲಿಕಟ್ಟೆಯ ನಿವಾಸಿ ಶ್ರೇಯಸ್  (22) ಮೃತಪಟ್ಟ ಯುವಕ.

ಘಟನೆಯಲ್ಲಿ  ಸಹಸವಾರ ಗಾಯಗೊಂಡ ಘಟನೆ ಪಡುವಾಲೂರರು ನಿವಾಸಿ ವಿಘ್ನೇಶ  (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು, ಬೈಕ್ ಅದಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಡವೆಯ ಕೋಡುಗಳು ದೇಹಕ್ಕೆ ನುಗ್ಗಿದ್ದರಿಂದ ಉಂಟಾದ ಗಾಯದಿಂದ ತೀವ್ರ ರಕ್ತಸ್ರಾವವಾಗಿ ಶ್ರೇಯಸ್ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ  ಬೈಕ್ ನಜ್ಜು ನುಜ್ಜಾಗಿದೆ. ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ.   ಶ್ರೇಯಸ್ ಬೆಂಗಳೂರಿನಲ್ಲಿ ಉದ್ಯೋಗಿದಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!