Monday, May 20, 2024
Homeಚಿಕ್ಕಮಗಳೂರುರಾಷ್ಟ್ರಕವಿ ಕುವೆಂಪು ಕುರಿತು ಅವಹೇಳನಕಾರಿ ಸಂದೇಶ ರವಾನೆ; ಸೂಕ್ತ ಕ್ರಮ ಕೈಗೊಳ್ಳುವಂತೆ ಯುವ ಒಕ್ಕಲಿಗರ ವೇದಿಕೆ...

ರಾಷ್ಟ್ರಕವಿ ಕುವೆಂಪು ಕುರಿತು ಅವಹೇಳನಕಾರಿ ಸಂದೇಶ ರವಾನೆ; ಸೂಕ್ತ ಕ್ರಮ ಕೈಗೊಳ್ಳುವಂತೆ ಯುವ ಒಕ್ಕಲಿಗರ ವೇದಿಕೆ ಆಗ್ರಹ

spot_img
- Advertisement -
- Advertisement -

ಶೃಂಗೇರಿ : ಸಾಮಾಜಿಕ ಜಾಲತಾಣಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿಯಾಗಿ ಬರೆದಿರುವ ಆರೋಪಿಗಳ ವಿರುದ್ಧ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಯುವ ಒಕ್ಕಲಿಗರ ವೇದಿಕೆ ಪದಾಧಿಕಾರಿಗಳು ತಹಶೀಲ್ದಾರ್ ಅವರನ್ನು ಆಗ್ರಹಿಸಿದ್ದಾರೆ. 

ಈ ಸಂದರ್ಭದಲ್ಲಿ ರೋಹಿತ್ ಚಕ್ರತೀರ್ಥ ಪರಿಷ್ಕರಣೆ ನಡೆಸಿರುವ ಪಠ್ಯವನ್ನು ತಡೆಹಿಡಿದು, ಹಳೇ ಪುಸ್ತಕಗಳನ್ನು ಮಕ್ಕಳಿಗೆ ಒದಗಿಸಬೇಕೆಂದು ಪದಾಧಿಕಾರಿಗಳು ಆಗ್ರಹಿಸಿದರು. ಸೂಕ್ತ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು. 

ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದ ಲಕ್ಷ್ಮಣ್ ಆಕಾಶ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಯುವ ಒಕ್ಕಲಿಗರ ವೇದಿಕೆಯ ಪದಾಧಿಕಾರಿಗಳು ಶೃಂಗೇರಿಯ ತಹಶೀಲ್ದಾರ್ ಅವರನ್ನು ಕೋರಿದರು. ಈ ಸಂದರ್ಭದಲ್ಲಿ ಯುವ ಒಕ್ಕಲಿಗ ವೇದಿಕೆಯ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!