- Advertisement -
![]()
- Advertisement -
ಬಂಟ್ವಾಳ: ಮುಸಲ್ಮಾನರ ಪವಿತ್ರ ಕ್ಷೇತ್ರ ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದಾತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮೆಕ್ಕಾದ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾನೆ ಎನ್ನಲಾಗಿದ್ದು, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಯುವಕನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿ, ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -


