Monday, April 29, 2024
Homeಕರಾವಳಿಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಾದ್ಯಂತ ಭಾರೀ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಾದ್ಯಂತ ಭಾರೀ ಮಳೆ ಸಾಧ್ಯತೆ

spot_img
- Advertisement -
- Advertisement -

ಮಂಗಳೂರು: ನಗರ ಸೇರಿದಂತೆ ಕರಾವಳಿ ಜಿಲ್ಲೆಯ ಹಲವೆಡೆಯಲ್ಲಿ ಬುಧವಾರ ಮುಂಜಾನೆಯಿಂದಲೇ ಅಲ್ಪ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೋಡ ಕವಿದ ವಾತಾವರಣವಿದ್ದು ಬುಧವಾರ ನಸುಕಿನ ಸಮಯದಲ್ಲಿ ತುಂತುರಾಗಿ ಸುರಿಯುತ್ತಿದ್ದ ಮಳೆ ಮತ್ತೆ ಬಿರುಸು ಪಡೆದಿದೆ. ಇದಕ್ಕೆ ಮುಖ್ಯ ಕಾರಣ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದಾಗಿದ್ದು, ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಮುಂದಿನ ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.

ಇನ್ನು ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40-55ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

- Advertisement -
spot_img

Latest News

error: Content is protected !!