Friday, June 5, 2026
Homeಕರಾವಳಿಬೆಳ್ತಂಗಡಿ: ಮತ್ತೊಮ್ಮೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್‌ ಪೂಂಜಾರಿಗೆ ಗೌರವಾರ್ಪಣೆ: ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ಮತ್ತೊಮ್ಮೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್‌ ಪೂಂಜಾರಿಗೆ ಗೌರವಾರ್ಪಣೆ: ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

- Advertisement -
- Advertisement -

ಬೆಳ್ತಂಗಡಿ: ಎರಡನೇ ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್‌ ಪೂಂಜಾರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಾರ್ಪಣೆ ಹಾಗೂ ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಜಯಂತ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ಸಮಾರಂಭ ನೆರವೇರಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಜಿಲ್ಲಾ ಉಪಾಧ್ಯಕ್ಷರು ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ, ಪಕ್ಷದ ಹಿರಿಯರು ಅಭ್ಯರ್ಥಿಯ ಎಜೇಂಟ್ ಸುಬ್ರಹ್ಮಣ್ಯ ಕುಮಾರ್ ಆಗರ್ತ,ಚುನಾವಣಾ ಕ್ಷೇತ್ರ ಪ್ರಭಾರಿ ಯತೀಶ್ ಅರ್ವರ್,ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಜನಾರ್ದನ, ಎಸ್ ಟಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಚೆನ್ನಕೇಶವ ನಾಯ್ಕ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಕಾಮಿಡಿ ಕಿಲಾಡಿ ಅನಿಶ್ ವೇಣೂರು, ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಶ್ರೀನಿವಾಸ ರಾವ್, ಉಪಾಧ್ಯಕ್ಷ ಸೀತಾರಾಮ ಬಿ. ಎಸ್., ಪದಾಧಿಕಾರಿಗಳು, ಹಿರಿಯ ನಾಯಕರುಗಳು, ವಿವಿಧ ಗ್ರಾಮಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!