Wednesday, June 26, 2024
Homeತಾಜಾ ಸುದ್ದಿ'ಲವ್‌ ಯೂ ರಚ್ಚು' ಸಿನಿಮಾ ಶೂಟಿಂಗ್‌ ವೇಳೆ ವಿದ್ಯುತ್‌ ತಂತಿ ತಗುಲಿ ಫೈಟರ್‌ ಸಾವು!

‘ಲವ್‌ ಯೂ ರಚ್ಚು’ ಸಿನಿಮಾ ಶೂಟಿಂಗ್‌ ವೇಳೆ ವಿದ್ಯುತ್‌ ತಂತಿ ತಗುಲಿ ಫೈಟರ್‌ ಸಾವು!

spot_img
- Advertisement -
- Advertisement -

ರಾಮನಗರ: ರಾಮನಗರ ಜಿಲ್ಲೆಯ ಜೋಗನದೊಡ್ಡಿ ನಡೆಯುತ್ತಿದ್ದ ಲವ್‌ಯೂ ರಚ್ಚು ಸಿನಿಮಾದ ಸಾಹಸದ ಚಿತ್ರೀಕರಣದ ವೇಳೆಯಲ್ಲಿ ವಿದ್ಯುತ್‌ ತಂತಿ ತಗುಲಿ ಪೈಟರ್‌ ವಿವೇಕ್‌ ಎನ್ನುವವರು ಸಾವನ್ನಪ್ಪಿದ್ದಾರೆ.



ತಮಿಳುನಾಡು ಮೂಲದ ವಿವೇಕ್‌ (28) ಅವರು ಇಂದು ಮಧ್ಯಾಹ್ನ ನಡೆಯುತ್ತಿದ್ದ ಸಿನಿಮಾ ಶೂಟಿಂಗ್‌ ವೇಳೆಯಲ್ಲಿ ಭಾಗವಹಿಸಿದ್ದ ವೇಳೆಯಲ್ಲಿ ವಿದ್ಯುತ್‌ ತಂತಿ ತಗುಲಿ ಗಾಯಗೊಂಡಿದ್ದವರನ್ನು ಕೂಡಲೇ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ವಿವೇಕ್‌ ಅವರ ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಘಟನ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಸಿನಿಮಾ ನಿರ್ಮಾಪಕ ಗುರುದೇಶ ಪಾಂಡೆಯವರು ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಲವ್‌ ಯೂ ರಚ್ಚು ಸಿನಿಮಾದಲ್ಲಿ ಅಜಯ್‌ ರಾವ್‌ ಮತ್ತು ರಚಿತ ರಾಮ್‌ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕರಾಗಿದ್ದಾರೆ.

- Advertisement -
spot_img

Latest News

error: Content is protected !!